ಶಿಶು ವಿಕ್ರಯ ಪ್ರಕರಣ: ವೈದ್ಯರ ಸಹಿತ ಈರ್ವರು ಅರೆಸ್ಟ್

ಲೋಕಬಂಧು ನ್ಯೂಸ್ ಉಡುಪಿ, ಜೂ.21
ನವಜಾತ ಶಿಶುವನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿಯ ಕಾಮತ್ ನರ್ಸಿಂಗ್ ಹೋಮ್'ನ ವೈದ್ಯ ಸೇರಿದಂತೆ ಇಬ್ಬರನ್ನು ಉಡುಪಿ ಮಹಿಳಾ ಠಾಣೆಯ ಪೊಲೀಸರು ಭಾನುವಾರ ಬಂಧಿಸಿದ್ದಾರೆ.ಕಾಮತ್ ನರ್ಸಿಂಗ್‌ ಹೋಮ್'ನ ಡಾ. ಸುರೇಂದ್ರ ಹಾಗೂ ಮಲ್ಪೆ ನೇಜಾರು ನಿವಾಸಿ ಪ್ರಕಾಶ್ ಬಂಧಿತರು.


ಸುಬ್ರಹ್ಮಣ್ಯ ನಗರದ ನವಜಾತ ಶಿಶುವೊಂದನ್ನು ಪ್ರಕಾಶ್ ಎಂಬವರಿಗೆ ಮಾರಾಟ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿದ ಮಹಿಳಾ ಠಾಣೆಯ ಪೊಲೀಸರು ಸಾಕ್ಷ್ಯಾಧಾರಗಳ ಆಧಾರದಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.