ಲೋಕಬಂಧು ನ್ಯೂಸ್ | ಉಡುಪಿ, ಜೂ.28
ಪಾಸ್ ಪೋರ್ಟ್, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ರೇಷನ್ ಕಾರ್ಡ್, ಗ್ಯಾಸ್ ಬಿಲ್, ವಿದ್ಯುತ್ ಬಿಲ್, ಚಾಲನಾ ಪರವಾನಿಗೆ ಸೇರಿದಂತೆ ಹಲವು ದಾಖಲೆಗಳು ಇಷ್ಟು ದಿನ ಭಾರತೀಯ ಪೌರತ್ವದ ಗುರುತಾಗಿ ಉಪಯೋಗಿಸಲ್ಪಡುತ್ತಿತ್ತು. ಆದರೆ, ಈಗ ಅವು ಪೌರತ್ವದ ದಾಖಲೆಗಳಲ್ಲ ಎಂಬ ರೀತಿಯ ಹೇಳಿಕೆಗಳಿಂದ ಜನರಲ್ಲಿ ಗೊಂದಲ ಸೃಷ್ಟಿಯಾಗಿದೆ.
ಪೌರತ್ವ ಸಾಬೀತುಪಡಿಸಲು ಯಾವ ದಾಖಲೆಗಳು ಅಗತ್ಯ ಎಂಬುದನ್ನು ಕೇಂದ್ರ ಸರ್ಕಾರ ಕೂಡಲೇ ಸ್ಪಷ್ಟಪಡಿಸಿ ಜನತೆಯಲ್ಲಿರುವ ಗೊಂದಲ ಪರಿಹರಿಸಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಭಾಸ್ಕರ ರಾವ್ ಕಿದಿಯೂರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ.
