ಲೋಕಬಂಧು ನ್ಯೂಸ್ | ಉಡುಪಿ, ಜೂ.15
ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮತ್ತವರ ಕುಟುಂಬ ವರ್ಗದವರ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ಬಗ್ಗೆ ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಕಳವಳ ವ್ಯಕ್ತಪಡಿಸಿದ್ದಾರೆ.
ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಸಲು ನೂರಾರು ಕೋಟಿ ರೂ.ಗಳ ವ್ಯವಹಾರ ನಡೆದಿದೆ ಎನ್ನುವುದು ಆತಂಕಕಾರಿ ವಿಚಾರ.
ಧಾರ್ಮಿಕ ಕ್ಷೇತ್ರದ ಬಗ್ಗೆ ಇಂಥ ಅವಹೇಳನಕಾರಿ ಷಡ್ಯಂತ್ರದ ಸಂಚು ರೂಪಿಸಿದವರನ್ನು ಬಯಲಿಗೆಳೆಯಬೇಕು. ಆ ಬಗ್ಗೆ ಸಮಸ್ತ ಹಿಂದೂ ಸಮಾಜ ಉಗ್ರವಾಗಿ ಪ್ರತಿಭಟಿಸಬೇಕು ಎಂದು ಶ್ರೀಪಾದರು ಕರೆ ನೀಡಿದ್ದಾರೆ.
