ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಮೊಹಮ್ಮದ್ ನಲಪಾಡ್‌ಗೆ ಕೋರ್ಟ್ ಸಮನ್ಸ್‌ ಜಾರಿ

ಲೋಕಬಂಧು ನ್ಯೂಸ್ | ಬೆಂಗಳೂರು, ಜೂ.27
ಆರ್.ಎಸ್.ಎಸ್. ಮತ್ತದರ ಸದಸ್ಯರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪದಡಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್‌ಗೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ತುರ್ತು ಸಮನ್ಸ್ ಜಾರಿ ಮಾಡಿದೆ.ಈ ಇಬ್ಬರೂ ನಾಯಕರ ವಿರುದ್ಧದ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆಯನ್ನು ವಿಚಾರಣೆಗೆ ಅಂಗೀಕರಿಸಿದ್ದು, ಜು.21ರಂದು ಖುದ್ದಾಗಿ ಕೋರ್ಟ್‌ಗೆ ಹಾಜರಾಗಲು ಆದೇಶಿಸಿದೆ. 


2025ರ ಅ.14ರಂದು ಪ್ರಿಯಾಂಕ್ ಖರ್ಗೆ ಮತ್ತು ನಲಪಾಡ್ ವಿರುದ್ಧ ಆರ್.ಎಸ್.ಎಸ್. ಕಾರ್ಯಕರ್ತ ಎ.ತೇಜಸ್ ಖಾಸಗಿ ದೂರು ದಾಖಲಿಸಿದ್ದು, ಇದೀಗ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.