ಲೋಕಬಂಧು ನ್ಯೂಸ್ | ಬೆಂಗಳೂರು, ಜೂ.18
ಬಿಜೆಪಿಯ ಮೂವರು ಶಾಸಕರು ಕಾಂಗ್ರೆಸ್‌ಗೆ ಅಡ್ಡ ಮತದಾನ ಮಾಡಿರುವುದಾಗಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಒಪ್ಪಿಕೊಂಡಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದಿಂದ ಕಣದಲ್ಲಿದ್ದ ಇಬ್ಬರು ಅಭ್ಯರ್ಥಿಗಳಾದ ಲಿಂಗರಾಜ ಪಾಟೀಲ್ ಮತ್ತು ಆರ್. ರಘು ಗೆಲುವು ಸಾಧಿಸಿದ್ದಾರೆ. ಒಂದು ಮತ ಅಸಿಂಧು ಆಗಿದೆ. ಆದರೆ, ಮೂವರು ನಮ್ಮ ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎನ್ನುವುದು ಗೊತ್ತಾಗಿದೆ.
ಪಕ್ಷಕ್ಕೆ ದ್ರೋಹ ಮಾಡಿದವರು ಯಾರು ಎನ್ನುವುದನ್ನು ಪತ್ತೆ ಮಾಡಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅಶೋಕ್ ಸ್ಪಷ್ಟಪಡಿಸಿದ್ದಾರೆ.
