ಲೋಕಬಂಧು ನ್ಯೂಸ್ ಬೆಳಗಾವಿ, ಜೂ.21
ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನವರು ದೊಡ್ಡ ಪ್ರಮಾಣದ ಹಣದ ಆಮಿಷ ಒಡ್ಡಿದ್ದರಿಂದ ಕೆಲವರು ಅಡ್ಡ ಮತದಾನ ಮಾಡಿದ್ದಾರೆ. ಇದು ಬಿಜೆಪಿಗೆ ಎಚ್ಚರಿಕೆಯ ಗಂಟೆ. ಈ ತರಹದ ಮುಖ್ಯಮಂತ್ರಿ ಇದ್ದಾಗ ಬಹಳ ಜಾಗ್ರತೆಯಿಂದ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಡ್ಡಮತದಾನದ ತನಿಖೆ ನಡೆಸಲು ಪಕ್ಷದ ವತಿಯಿಂದ ಸಮಿತಿ ರಚನೆ ಮಾಡಲಾಗಿದೆ. ಸಮಿತಿ ವರದಿ ಬಂದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೆಎಲ್‌ಇ ಸಂಸ್ಥೆ ಅಧ್ಯಕ್ಷ ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ ದೊರೆತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರಭಾಕರ ಕೋರೆ ಕೆಎಲ್‌ಇ ಸಂಸ್ಥೆ ಮೂಲಕ ಉತ್ತರ ಕರ್ನಾಟಕ ಅಭಿವೃದ್ಧಿಗೆ ನೀಡಿದ ಕೊಡುಗೆಗಾಗಿ ಈ ಗೌರವ ನೀಡಲಾಗಿದೆ. ಅವರಿಗೆ ಅಭಿನಂದನೆಗಳು ಎಂದರು.