ತಮಿಳುನಾಡು ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ನಿರ್ಧಾರ

ಲೋಕಬಂಧು ನ್ಯೂಸ್ | ಉಡುಪಿ, ಜೂ.11
ಕೊಲ್ಲೂರಿಗೆ ಭೇಟಿ ನೀಡಲಿರುವ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ಕರವೇ ಉಡುಪಿ ಜಿಲ್ಲಾ ಗೌರವಾಧ್ಯಕ್ಷ ಅನ್ಸಾರ್ ಅಹಮ್ಮದ್ ತಿಳಿಸಿದ್ದಾರೆ.
ಸಿಎಂ ವಿಜಯ್ ಅವರು ಮೇಕೆದಾಟು ಯೋಜನೆ ಜಾರಿಗೆ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ವಿರೋಧಿಸಿ ಈ ಕ್ರಮ ಕೈಗೊಳ್ಳಲಾಗುವುದು.


ತಮಿಳುನಾಡು ಮುಖ್ಯಮಂತ್ರಿಯ ಕೊಲ್ಲೂರು ಭೇಟಿ ಸಂದರ್ಭದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಲಾಗುವುದು. ನಂತರ ಉಡುಪಿ ಜಿಲ್ಲೆಯಲ್ಲಿ ಹಾದುಹೋಗುವ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಅನ್ಸಾರ್ ತಿಳಿಸಿದ್ದಾರೆ.