ಉಡುಪಿ ಜಿಲ್ಲಾ ರೆಡ್ ಕ್ರಾಸ್ ಸಭಾಪತಿಯಾಗಿ ಡಾ.ಅಶೋಕ್ ಕುಮಾರ್

ಲೋಕಬಂಧು ನ್ಯೂಸ್ | ಉಡುಪಿ, ಜೂ.20
ಉಡುಪಿ ಜಿಲ್ಲಾ ರೆಡ್ ಕ್ರಾಸ್ ಸಭಾಪತಿಯನ್ನಾಗಿ ಖ್ಯಾತ ವೈದ್ಯ ಡಾ. ಅಶೋಕ್ ಕುಮಾರ್ ವೈ.ಜಿ. ಅವರನ್ನು ಇತ್ತೀಚೆಗೆ ರೆಡ್ ಕ್ರಾಸ್ ಭವನದಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ನೇಮಕ ಮಾಡಲಾಯಿತು.
ಕರ್ನಾಟಕ ರಾಜ್ಯ ರೆಡ್ ಕ್ರಾಸ್ ಸಭಾಪತಿಯಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಜಿಲ್ಲಾ ಸಭಾಪತಿ ಸ್ಥಾನಕ್ಕೆ ಬಸ್ರೂರು ರಾಜೀವ್ ಶೆಟ್ಟಿ ನೀಡಿದ ರಾಜೀನಾಮೆ ಅಂಗೀಕರಿಸಿದ ಆಡಳಿತ ಮಂಡಳಿ, ಈ ನೇಮಕ ಮಾಡಿದೆ.


ಡಾ.ಅಶೋಕ್ ಕುಮಾರ್ ವೈ.ಜಿ. ಅವರು ಬಸ್ರೂರು ರಾಜೀವ್ ಶೆಟ್ಟಿ ಅವರಿಂದ ಸಭಾಪತಿಯಾಗಿ ಅಧಿಕಾರ ಸ್ವೀಕರಿಸಿದರು. ಅವರು ಕಳೆದ ಒಂದೂವರೆ ದಶಕದಿಂದ ಜಿಲ್ಲಾ ರೆಡ್ ಕ್ರಾಸ್ ಆಡಳಿತ ಮಂಡಳಿಯ ಸದಸ್ಯರಾಗಿದ್ದಾರೆ.


ಜಿಲ್ಲಾ ರೆಡ್ ಕ್ರಾಸ್ ಉಪಸಭಾಪತಿಯಾಗಿ ಆಡಳಿತ ಮಂಡಳಿ ಸದಸ್ಯ ವಿ.ಜಿ. ಶೆಟ್ಟಿ ಆಯ್ಕೆಯಾಗಿದ್ದಾರೆ.