ಡಾ.ಜಿ.ಶಂಕರ್ 'ಅಮೂಲ್ಯ ರತ್ನ'

ಲೋಕಬಂಧು ನ್ಯೂಸ್ | ಉಡುಪಿ, ಜೂ.28
ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಉಡುಪಿ ಘಟಕ ಹಾಗೂ ಮಹಿಳಾ ವಿಭಾಗ ಆಶ್ರಯದಲ್ಲಿ ಯಕ್ಷಧ್ರುವ ಪಟ್ಲ ದಶಮ ಸಂಭ್ರಮದ ನೆನಪಿನಲ್ಲಿ ಶನಿವಾರ ಉಡುಪಿ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಅಂಬಲಪಾಡಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ.ಜಿ.ಶಂಕರ್ ಅವರನ್ನು ಅಮೂಲ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಲಾಪೋಷಕ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಮಂಜ, ಯಕ್ಷಧ್ರುವ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ ಶೆಟ್ಟಿ, ಮಣಿಪಾಲ ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಮೊದಲಾದವರಿದ್ದರು.