ಉಚಿತ ಅಸ್ತಮಾ ಚಿಕಿತ್ಸಾ ಶಿಬಿರ

ಲೋಕಬಂಧು ನ್ಯೂಸ್ | ಮಣಿಪಾಲ, ಜೂ.22
ಇಲ್ಲಿನ ಶಿವಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಕಾಯಚಿಕಿತ್ಸಾ ಸ್ನಾತಕೋತ್ತರ ವಿಭಾಗ ವತಿಯಿಂದ ಜೂ.22ರಿಂದ 29ರ ವರೆಗೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಆಸ್ತಮಾ ರೋಗದ ಉಚಿತ ತಪಾಸಣೆ, ಪರೀಕ್ಷೆ ಹಾಗೂ ಚಿಕಿತ್ಸಾ ಶಿಬಿರ ನಡೆಯಲಿದೆ.
20 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದೊಳಗಿನ ಅಸ್ತಮಾ ರೋಗಿಗಳು ಹಾಗೂ ಅಲರ್ಜಿಯಿಂದಾಗಿ ಆಗಾಗ ಕೆಮ್ಮು, ವೀಸಿಂಗ್ (ಉಸಿರಾಟದಲ್ಲಿ ಶಬ್ದ) ಅಥವಾ ಉಸಿರಾಟದ ತೊಂದರೆ ಅನುಭವಿಸುವವರು ಶಿಬಿರದಲ್ಲಿ ಭಾಗವಹಿಸಬಹುದು.


ಹೆಚ್ಚಿನ ಮಾಹಿತಿಗಾಗಿ 8123403233ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.