ಲೋಕಬಂಧು ನ್ಯೂಸ್ ಬೆಂಗಳೂರು, ಜೂ.4
ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ರಾಜ್ಯದ ಎಲ್ಲಾ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಘೋಷಿಸಿದ್ದಾರೆ.ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಈ ಮೊದಲು ವಿದ್ಯಾರ್ಥಿನಿಯರಿಗೆ ಮಾತ್ರ ಫ್ರೀ ಬಸ್ ಪಾಸ್ ನೀಡಲಾಗುತ್ತಿದ್ದು, ಇನ್ನು ಮುಂದೆ ಎಲ್ಲ ವಿದ್ಯಾರ್ಥಿಗಳಿಗೂ ವಿಸ್ತರಿಸಲು ನಿರ್ಧರಿಲಾಗಿದೆ. ಅದಕ್ಕಾಗಿ ಎಷ್ಟೇ ಹಣ ಖರ್ಚಾದರೂ ವಿದ್ಯಾರ್ಥಿಗಳಿಗಾಗಿ ಅದನ್ನು ಜಾರಿ ಮಾಡುತ್ತೇವೆ. ಆದರೆ, ವಿದ್ಯಾರ್ಥಿಗಳು ಅದಕ್ಕಾಗಿ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ ಎಂದರು.