ಲೋಕಬಂಧು ನ್ಯೂಸ್ | ಉಡುಪಿ, ಜೂ.19
ನಗರದ ವಳಕಾಡು ಸರಕಾರಿ ಸಯುಕ್ತ ಪ್ರೌಢಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಿಸಲಾಯಿತು.
ಮಿಸ್ಸಿಲಿ ಇಂಡಿಯಾ ಪ್ಯಾಕೇಜಿಂಗ್ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ತನ್ನ ಸಿಎಸ್ಆರ್ ಫಂಡ್'ನಡಿ ಒದಗಿಸಲಾದ ನೋಟ್ ಪುಸ್ತಕಗಳನ್ನು ಬೆಂಗಳೂರು ಒನ್ ಗುಡ್ ಸ್ಟೆಪ್ ವತಿಯಿಂದ ವಿತರಿಸಲಾಯಿತು.
ಪ್ರಾಥಮಿಕ ವಿಭಾಗದ ಎಸ್.ಡಿ.ಎಂ.ಸಿ ಅಧ್ಯಕ್ಷ ಡಾ. ವಿರೂಪಾಕ್ಷ ದೇವರಮನಿ ಅಧ್ಯಕ್ಷತೆ ವಹಿಸಿದ್ದು, ಮುಖ್ಯ ಅತಿಥಿಗಳಾಗಿ ನಿರಾಲಿ ಓರಾ, ಅಲಕಾ ಪೈ , ಡಯಟ್ ಉಪ ಪ್ರಾಂಶುಪಾಲ ಯೋಗಾನರಸಿಂಹಸ್ವಾಮಿ, ಪ್ರೌಢಶಾಲಾ ವಿಭಾಗದ ಎಸ್.ಡಿ.ಎಂಸಿ ಅಧ್ಯಕ್ಷ ರಮೇಶ ಹೆಗಡೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಶೇಟ್, ಕಾರ್ಯದರ್ಶಿ ನಾಗೇಶ್ ಪ್ರಭು ಮೊದಲಾದವರಿದ್ದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಮಂತ್ರಿಮಂಡಲದ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಪ್ರೌಢಶಾಲಾ ಮುಖ್ಯ ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಕುಸುಮ ವಂದಿಸಿದರು. ಶಿಕ್ಷಕಿ ಲಲಿತ ಕುಮಾರಿ ನಿರೂಪಿಸಿದರು.
