ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರು

ಲೋಕಬಂಧು ನ್ಯೂಸ್ | ಉಡುಪಿ, ಜೂ.19
ಉಡುಪಿ ವಿಧಾನಸಭಾ ಕ್ಷೇತ್ರದ ಕಲ್ಮಾಡಿ ಬಂಕೇರಕಟ್ಟ ನೂತನ ಸೇತುವೆ ಹಾಗೂ ಪೆರಂಪಳ್ಳಿ ರೈಲ್ವೆ ಮೇಲ್ಸೇತುವೆ ಅಗಲಗೊಳಿಸುವ ಕಾಮಗಾರಿಗೆ 15 ಕೋಟಿ ರೂ. ಅನುದಾನ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾಗಿದೆ ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಹೇಳಿದ್ದಾರೆ.
ಅಂಬಾಗಿಲು- ಮಣಿಪಾಲ ರಸ್ತೆ ವಾಹನ ದಟ್ಟಣೆಯಿಂದ ಕೂಡಿದ್ದು, ರಸ್ತೆ ಚತುಷ್ಪಥವಾದ ನಂತರ ಪೆರಂಪಳ್ಳಿ ರೈಲ್ವೆ ಮೇಲ್ಸೇತುವೆಯಲ್ಲಿ ವಾಹನ ಸವಾರರು ಹಾಗೂ ಪಾದಚಾರಿಗಳ ಸುಗಮ ಸಂಚಾರಕ್ಕೆ  ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಅಗಲಗೊಳಿಸುವುದು ಅತೀ ಅವಶ್ಯಕವಾಗಿತ್ತು. ಕಲ್ಮಾಡಿ ಬಂಕೇರಕಟ್ಟ ಸೇತುವೆಯೂ ಹಳೆಯದಾಗಿದ್ದು ಪ್ರತಿವರ್ಷ ಮಳೆಗಾಲದಲ್ಲಿ ಕೃತಕ ನೆರೆ ಹಾಗೂ ವಾಹನಗಳ ಸಂಚಾರಕ್ಕೆ ಸಮಸ್ಯೆ ಉಂಟಾಗುತ್ತಿತ್ತು.


ಕಳೆದ ಬಾರಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಉಡುಪಿ ಜಿಲ್ಲೆಗೆ ಆಗಮಿಸಿದ್ದ ಸಂದರ್ಭದಲ್ಲಿ ಮನವಿ ಸಲ್ಲಿಸಲಾಗಿತ್ತು. ಲೋಕೋಪಯೋಗಿ ಇಲಾಖೆ ಮೂಲಕ ಸಲ್ಲಿಸಿದ ಪ್ರಸ್ತಾವನೆಗೆ ಪೆರಂಪಳ್ಳಿ ರೈಲ್ವೆ ಮೇಲ್ಸೇತುವೆ ಅಗಲಗೊಳಿಸಲು 9.95 ಕೋಟಿ ಹಾಗೂ ಕಲ್ಮಾಡಿ ಬಂಕೇರಕಟ್ಟದಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ  5 ಕೋಟಿ ಅನುದಾನ ಲೋಕೋಪಯೋಗಿ ಇಲಾಖೆ ಮೂಲಕ  ಮಂಜೂರುಗೊಂಡಿದ್ದು,  ಶೀಘ್ರದಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಶಾಸಕ ಯಶಪಾಲ್ ಸುವರ್ಣ ತಿಳಿಸಿದ್ದಾರೆ.