ಲೋಕಬಂಧು ನ್ಯೂಸ್ | ಬೆಳ್ತಂಗಡಿ, ಜೂ.11
ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪದಲ್ಲಿ ಚಂದ್ರಶೇಖರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ವರ್ಗಾವಣೆ ಮಾಡಿಕೊಳ್ಳದೆ ಕಳೆದ 25 ವರ್ಷಗಳಿಂದ ಬೀಡುಬಿಟ್ಟಿರುವ ಔಷಧಿ ವಿಭಾಗದ ಮುಖ್ಯಸ್ಥ, ಮೂಲತಃ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಕೆದ್ದು ನಿವಾಸಿ ಚಂದ್ರಶೇಖರ್ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಔಷಧಾಲಯದ ಉಗ್ರಾಣದಲ್ಲಿ ಲೈಂಗಿಕ ಕಿರುಕುಳ ನೀಡಿದ್ದು, ಆ ಬಗ್ಗೆ ಯಾರಲ್ಲಾದ್ದರೂ ಹೇಳಿದರೆ ಕೆಲಸದಿಂದ ತೆಗೆಯುವುದಾಗಿ ಪದೇ ಪದೇ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಚಂದ್ರಶೇಖರ್ ವಿರುದ್ಧ ಆಸ್ಪತ್ರೆಯಲ್ಲಿ ಮೇಡಿಕಲ್ ಸಾಮಾಗ್ರಿಗಳನ್ನು ಖಾಸಗಿ ಮೆಡಿಕಲ್'ಗಳಿಗೆ ಸಾಗಿಸುತ್ತಿರುವ ಆರೋಪ ಈ ಹಿಂದಿನಿಂದ ಕೇಳಿಬರುತ್ತಿತ್ತು. ಆ ಬಗ್ಗೆ ಅನೇಕ ಬಾರಿ ದೂರು ನೀಡಿದ್ದರೂ ಇಲಾಖೆಯಿಂದ ಯಾವುದೇ ಕ್ರಮಗೊಂಡಿಲ್ಲ. ಚಂದ್ರಶೇಖರ್'ಗೆ ಇಲಾಖೆಯ ಮೇಲಧಿಕಾರಿಗಳ ಬೆಂಬಲವಿದೆ ಎನ್ನಲಾಗಿದೆ.
ಅಲ್ಲದೆ, ಹಲವರು ಯುವತಿಯರು ಮತ್ತು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪವೂ ಇದೆ. ಆದರೆ, ಭಯದಿಂದ ಮಾರ್ಯಾದೆಗೆ ಅಂಜಿ ಯಾರೂ ದೂರು ಕೊಡಲು ಮುಂದೆ ಬಂದಿರಲಿಲ್ಲ. ಇದೀಗ ಆಸ್ಪತ್ರೆಯ ಸಿಬ್ಬಂದಿ ತನಗಾದ ಲೈಂಗಿಕ ಕಿರುಕುಳವನ್ನು ಧೈರ್ಯದಿಂದ ಮನೆಯವರಿಗೆ ತಿಳಿಸಿ, ಪೊಲೀಸರಿಗೆ ಗುರುವಾರ ದೂರು ಕೊಟ್ಟಿದ್ದಾರೆ.
