ಲೋಕಬಂಧು ನ್ಯೂಸ್ | ಕಾರ್ಕಳ, ಜೂ.22
ನಿತ್ಯ ಜೀವನದಲ್ಲಿ ಯೋಗ ಮಾಡುವುದರಿಂದ ಸದಾ ಆರೋಗ್ಯವಂತರಾಗಿರಲು ಸಾಧ್ಯ ಎಂದು ಜ್ಞಾನಸುಧಾದ ಪೂರ್ವ ವಿದ್ಯಾರ್ಥಿನಿ, ಮಣಿಪಾಲ ಮಾಹೆ ಯೋಗಕೇಂದ್ರದ ಸಹಾಯಕ ಪ್ರಾಧ್ಯಾಪಿಕೆ ಡಾ.ಆತ್ಮಿಕ ಶೆಟ್ಟಿ ಹೇಳಿದರು.
ಇಲ್ಲಿನ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ವಿಶ್ವ ಯೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಯೋಗದ ಮಹತ್ವವನ್ನು ಪ್ರಾತ್ಯಕ್ಷಿಕೆ ಮೂಲಕ ಅವರು ಪ್ರಸ್ತುತಪಡಿಸಿದರು.
ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ದಿನೇಶ್ ಎಂ. ಕೊಡವೂರ್, ಉಪ್ರಪ್ರಾಂಶುಪಾಲರಾದ ಸಾಹಿತ್ಯ ಹಾಗೂ ಉಷಾ ರಾವ್ ಯು ಮತ್ತು ದೈಹಿಕ ಶಿಕ್ಷಣ ನಿರ್ದೇಶಕಿ ಸೌಜನ್ಯ ಹೆಗ್ಡೆ ಇದ್ದರು. ಆಂಗ್ಲಭಾಷಾ ಉಪನ್ಯಾಸಕಿ ದಿವ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
.jpg)