ಪತ್ನಿಯನ್ನು ಕೊಂದು ಪತಿ ನೇಣು ಬಿಗಿದು ಆತ್ಮಹತ್ಯೆ

ಲೋಕಬಂಧು ನ್ಯೂಸ್ | ಪುತ್ತೂರು, ಜೂ.20
ಪತ್ನಿಯನ್ನು ಕೊಂದು ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಡಬ ಆಲಂಕಾರು ಕಜೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಆಲಂಕಾರು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿದ್ದ ಕಾರ್ಕಳ ಬಜಗೋಳಿಯ ದಿನೇಶ್ ಹಾಗೂ ಸಿದ್ಧಕಟ್ಟೆಯ ಸಂಗೀತ ದಂಪತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.


ಪತ್ನಿಯನ್ನು ಕೊಂದು ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ದಂಪತಿ ಎರಡು ವರ್ಷದ ಹೆಣ್ಣು ಮಗುವಿನೊಂದಿಗೆ ವಾಸವಾಗಿದ್ದರು.


ಒಂದು ತಿಂಗಳ ಹಿಂದೆ ಆಲಂಕಾರು ಪೇಟೆಯ ಹೋಟೆಲ್ ಬಿಟ್ಟು ತೆರಳಿದ್ದ ಈ ದಂಪತಿ, ಜೂ.19ರ ಸಂಜೆ ಆಲಂಕಾರು ಕಜೆಯ ಬಾಡಿಗೆ ಮನೆಗೆ ಪುನಃ ಬಂದಿದ್ದರು. ಜೂ.20ರಂದು ದಂಪತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮನೆಯ ಒಳಗಿನ ಚಿಲಕ ಹಾಕಲಾಗಿತ್ತು. ಎರಡು ವರ್ಷದ ಹೆಣ್ಣು ಮಗು ಅತ್ತು ಅತ್ತು ಮತ್ತೆ ನಿದ್ದೆಗೆ ಜಾರಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.


ಘಟನಾ ಸ್ಥಳಕ್ಕೆ ಕಡಬ ಪೊಲೀಸ್ ಉಪನಿರೀಕ್ಷಕ ಜಂಬುರಾಜ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.