ಲೋಕಬಂಧು ನ್ಯೂಸ್ ಉಡುಪಿ, ಜೂ.25
ಪತ್ರಕರ್ತರು ಓದಿಗೆ ಒತ್ತುನೀಡಿ ತಮ್ಮ ಜ್ಞಾನವನ್ನು ಸಂಪಾದಿಸಿಕೊಳ್ಳಬೇಕು ಎಂದು ಉಡುಪಿ ಅಂತರ್ಜಲ ನಿರ್ದೇಶನಾಲಯದ ಹಿರಿಯ ಭೂವಿಜ್ಞಾನಿ ಡಾ.ದಿನಕರ ಶೆಟ್ಟಿ ಹೇಳಿದರು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಶುಕ್ರವಾರ ಪತ್ರಿಕಾ ಭವನದಲ್ಲಿ ನಡೆದ ತಿಂಗಳ ಅಂಗಳ ಸಂವಾದ ಕಾರ್ಯಕ್ರಮದಲ್ಲಿ ಸನ್ಮತಿ ಪತ್ರಿಕೆಯ ಮೇ ತಿಂಗಳ ಸಂಚಿಕೆ ಅನಾವರಣಗೊಳಿಸಿ ಮಾತನಾಡಿದರು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಪತ್ರಿಕಾ ಭವನ ಸಮಿತಿ ಸಂಚಾಲಕ ಅಂಕಿತ್ ಶೆಟ್ಟಿ ಉಪಸ್ಥಿತರಿದ್ದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿ, ಕಾರ್ಯದರ್ಶಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಪತ್ರಕರ್ತ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು.

.jpg)
.jpg)