ಲೋಕಬಂಧು ನ್ಯೂಸ್ | ಉಡುಪಿ, ಜೂ.16
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಜೂ.19ರಂದು ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದೆ.
ಮುಖ್ಯ ಅತಿಥಿಯಾಗಿ ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಮ್ ಬಾಬು ಎಂ. ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ 30 ಗಿಡಗಳನ್ನು ನೆಡಲಾಗುತ್ತದೆ.ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅಧ್ಯಕ್ಷತೆ ವಹಿಸಲಿದ್ದು ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಸಂಘದ ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೋಹನ್, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶೀರೂರು, ಪತ್ರಿಕಾ ಭವನ ಸಮಿತಿ ಸಂಚಾಲಕ ಅಂಕಿತ್ ಶೆಟ್ಟಿ ಉಪಸ್ಥಿತರಿರುವರು.
ಬಳಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಜೊತೆ ಸಂವಾದ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ತಿಳಿಸಿದ್ದಾರೆ.
