ಮಾದಕ ವಸ್ತು ಎಂಡಿಎಂಎ ಮಾರುತ್ತಿದ್ದಾತನ ಸೆರೆ

ಲೋಕಬಂಧು ನ್ಯೂಸ್ | ಮಲ್ಪೆ, ಜೂ.27
ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ವಸ್ತು ಎಂ.ಡಿ.ಎಂ.ಎ ಹೊಂದಿದ್ದ ಹಾಗೂ ಕಾಪು, ಬ್ರಹ್ಮಾವರ, ಉಡುಪಿ, ಮಣಿಪಾಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬ್ರಹ್ಮಾವರ ನಿವಾಸಿ ಸೈಯ್ಯದ್ ಮೊಹಮ್ಮದ್ ಮೆಹರಾಜ್ (19)ನನ್ನು ದಸ್ತಗಿರಿ ಮಾಡಲಾಗಿದೆ.
ಆತನಿಂದ 1.03 ಗ್ರಾಂ ಎಂಡಿಎಂಎ ಮತ್ತು ಸಾಗಾಟಕ್ಕೆ ಬಳಸಿದ ಸ್ಕೂಟರ್ ಸಹಿತ ಒಟ್ಟು 1.52 ಲಕ್ಷ ರೂ. ಮೌಲ್ಯದ ಸೊತ್ತು ವಶಪಡಿಸಿಕೊಳ್ಳಲಾಗಿದೆ.


ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಹಾಗೂ ಮಲ್ಪೆ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಮಲ್ಪೆ ಠಾಣೆಯಲ್ಲಿ ಪ್ರಕಣ ದಾಖಲಿಸಿ, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.