ಕೃಷ್ಣಮಠದಲ್ಲಿ ಪಾಯದ ಕೋಣೆ ಉದ್ಘಾಟಿಸಿದ ಸಚಿವೆ‌ ನಿರ್ಮಲಾ

ಲೋಕಬಂಧು ನ್ಯೂಸ್ | ಉಡುಪಿ, ಜೂ.13
ಪರ್ಯಾಯ ಶೀರೂರು ಮಠ ವತಿಯಿಂದ ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣದೇವರ ನೈವೇದ್ಯಕ್ಕಾಗಿ ಹೊಸದಾಗಿ ನಿರ್ಮಿಸಿದ ಪಾಯದ ಕೋಣೆ (ಹಾಲು ಕಾಯಿಸುವ ಕೋಣೆ) ಯನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಉದ್ಘಾಟಿಸಿದರು. ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಿದ್ದರು.
ಈ ಸಂದರ್ಭದಲ್ಲಿ ಶಿರೂರು ಮಠದ ದಿವಾನ ಡಾ. ಉದಯ ಕುಮಾರ್ ಸರಳತ್ತಾಯ, ಪಾರುಪತ್ಯೆಗಾರ ಶ್ರೀಶ ಭಟ್ ಕಡೆಕಾರು, ಶಾಸಕರಾದ ಯಶಪಾಲ್ ಸುವರ್ಣ ಉಡುಪಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ ಕಾಪು, ಪರ್ಯಾಯ ಸ್ವಾಗತ ಸಮಿತಿ ಕಾರ್ಯದರ್ಶಿ ಮಧುಕರ ಮುದ್ರಾಡಿ ಉಪಸ್ಥಿತರಿದ್ದರು.