ಕಾಪು ಹೊಸ ಮಾರಿಗುಡಿ ಸನ್ನಿಧಿಗೆ ಸಚಿವೆ ನಿರ್ಮಲಾ ಸೀತಾರಾಮನ್

ಲೋಕಬಂಧು ನ್ಯೂಸ್ |  ಕಾಪು, ಜೂ.13
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಕಾಪು ಶ್ರೀ ಹೊಸ ಮಾರಿಗುಡಿ ಸನ್ನಿಧಿಗೆ ಭೇಟಿ ನೀಡಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರ್ಶನ ಪಡೆದರು.
ದೇವಳದ ಪ್ರಧಾನ ತಂತ್ರಿ ಜ್ಯೋತಿಷ್ಯ ವಿದ್ವಾನ್ ಕುಮಾರಗುರು ತಂತ್ರಿ ಕೊರಂಗ್ರಪಾಡಿ, ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯ ಅವರು ದೇವರಲ್ಲಿ ಪ್ರಾರ್ಥಿಸಿ, ಪ್ರಸಾದ ನೀಡಿದರು. ರಕ್ಷಾ ರೂಪದಲ್ಲಿ ದೇವಿಯ ಸೀರೆಯನ್ನು ಪ್ರಸಾದವಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಭಾವುಕರಾದರು.
ಕಾಪು ಶಾಸಕ ಮತ್ತು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಮಾಜಿ ಆಡಳಿತ ಮೊಕ್ತೇಸರ ರಮೇಶ್ ಹೆಗ್ಡೆ ಕಲ್ಯ, ಮೊಕ್ತೇಸರರಾದ ಶೇಖರ ಸಾಲ್ಯಾನ್, ರವೀಂದ್ರ ಮಲ್ಲಾರು, ಜಯಲಕ್ಷ್ಮೀ ಎಸ್. ಶೆಟ್ಟಿ ಮತ್ತು ಚರಿತ ದೇವಾಡಿಗ, ಬಿಜೆಪಿ ಮುಖಂಡರಾದ ಶಿಲ್ಪಾ ಜಿ. ಸುವರ್ಣ ಮತ್ತು ಗೀತಾಂಜಲಿ ಎಂ. ಸುವರ್ಣ, ಜೆಡಿಎಸ್ ಮುಖಂಡ ಜಯರಾಮ ಆಚಾರ್ಯ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಮೊದಲಾದವರಿದ್ದರು.