ಕೃಷ್ಣಮಠಕ್ಕೆ ಸಚಿವೆ ನಿರ್ಮಲಾ ಭೇಟಿ

ಲೋಕಬಂಧು ನ್ಯೂಸ್ | ಉಡುಪಿ, ಜೂ.13
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ಪರ್ಯಾಯ ಪೀಠಾಧೀಶ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.
ಈ ಸಂದರ್ಭದಲ್ಲಿ ಪರ್ಯಾಯ ಶೀರೂರು ಮಠದ ದಿವಾನ ಡಾ.ಉದಯ ಕುಮಾರ್ ಸರಳತ್ತಾಯ, ಪಾರುಪತ್ಯೆಗಾರ ಶ್ರೀಶ ಭಟ್ ಕಡೆಕಾರು, ಉಡುಪಿ ಶಾಸಕ ಯಶಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ವಕ್ತಾರ ಮಧುಕರ ಮುದ್ರಾಡಿ ಇದ್ದರು.