ಎಂ.ಎನ್.ಅನುಚೇತ್ ವಾರ್ತಾ ಇಲಾಖೆ ನೂತನ ಆಯುಕ್ತ

ಲೋಕಬಂಧು ನ್ಯೂಸ್ | ಬೆಂಗಳೂರು, ಜೂ.25
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಡಿಐಜಿಪಿ ಎಂ.ಎನ್.ಅನುಚೇತ್ ನೇಮಕಗೊಂಡಿದ್ದಾರೆ.
ಪ್ರಸ್ತುತ ಆಯುಕ್ತರಾಗಿರುವ ಐಪಿಎಸ್ ಅಧಿಕಾರಿ ಹೇಮಂತ್ ಎಂ. ನಿಂಬಾಳ್ಕರ್ ಅವರನ್ನು ಆ ಹುದ್ದೆಯಿಂದ ವರ್ಗಾವಣೆಗೊಳಿಸಲಾಗಿದೆ.


ಜೊತೆಗೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರ ಹುದ್ದೆಯ ಹೆಚ್ಚುವರಿ ಪ್ರಭಾರವನ್ನೂ ಸಹ ಅನುಚೇತ್ ಅವರಿಗೆ ವಹಿಸಲಾಗಿದೆ.


ಈ ಹಿಂದೆ ಕ್ರೀಡಾ ಇಲಾಖೆ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ಕುಮಾರ್ ಟಿ.ಎಚ್.ಎಂ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ.


ಮುಂದಿನ ಆದೇಶದ ವರೆಗೆ ಎಂ.ಎನ್.ಅನುಚೇತ್ ಎರಡೂ ಇಲಾಖೆಗಳ ಜವಾಬ್ದಾರಿ ನಿರ್ವಹಿಸಲಿದ್ದಾರೆ.