ಲೋಕಬಂಧು ನ್ಯೂಸ್ ಉಡುಪಿ, ಜೂ.21
ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಪೂರಕವಾದ ಯೋಗಾಭ್ಯಾಸದಿಂದ ಉತ್ತಮ ಆರೋಗ್ಯ ಸಾಧ್ಯ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಭಾರತೀಯ ಯೋಗ ಪದ್ಧತಿಗೆ ವಿಶ್ವ ಮಾನ್ಯತೆ ಲಭಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ ಶೆಟ್ಟಿ ಹೇಳಿದರು.ವಿಶ್ವ ಯೋಗ ದಿನಾಚರಣೆ ಅಂಗವಾಗಿ ನಗರದ ಹೋಟೆಲ್ ಕಿದಿಯೂರ್ ಶೇಷಶಯನ ಸಭಾಂಗಣದಲ್ಲಿ ನಡೆದ ಯೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಶಾಸಕ ಯಶಪಾಲ್ ಸುವರ್ಣ ಮಾತನಾಡಿ, ಯೋಗಾಭ್ಯಾಸ ಕೇವಲ ಒಂದು ದಿನಕ್ಕೆ ಸೀಮಿತವಾಗದೇ ಅದು ನಿತ್ಯ ನಿರಂತರವಾಗಿರಬೇಕು. ಯೋಗದಿಂದ ಆರೋಗ್ಯಪೂರ್ಣ ಜೀವನ ಸಾಧ್ಯ ಎಂದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಬಿಲ್ಲಾಡಿ ಪೃಥ್ವಿರಾಜ್ ಶೆಟ್ಟಿ, ಪಕ್ಷ ಪ್ರಮುಖರಾದ ಮಟ್ಟಾರು ರತ್ನಾಕರ ಶೆಟ್ಟಿ, ಶ್ರೀಕಾಂತ್ ನಾಯಕ್, ಮಧುಕರ ಮುದ್ರಾಡಿ, ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ ಮೊದಲಾದವರಿದ್ದರು.ಬಳಿಕ ಯೋಗಾಭ್ಯಾಸ ನಡೆಸಲಾಯಿತು. ನಿರಂತರ ಯೋಗ ಸಂಸ್ಥೆಯ ಮಮತ ಶೆಟ್ಟಿಗಾರ್ ಯೋಗ ಪ್ರಾತ್ಯಕ್ಷತೆಯಲ್ಲಿ ಸಹಕರಿಸಿದರು.