ನೀಟ್ ಮರುಪರೀಕ್ಷೆ: ಭಾರತದಲ್ಲಿ ಟೆಲಿಗ್ರಾಮ್ ಆ್ಯಪ್ ತಾತ್ಕಾಲಿಕ ಬ್ಯಾನ್

ಲೋಕಬಂಧು ನ್ಯೂಸ್ | ನವದೆಹಲಿ, ಜೂ.16
ಜೂ. 21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆ ಹಿನ್ನೆಲೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ವಂಚನೆ ಜಾಲಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು ಟೆಲಿಗ್ರಾಮ್ ಆ್ಯಪ್'ನ್ನು ಜೂ.22ರ ವರೆಗೆ ತಾತ್ಕಾಲಿಕವಾಗಿ ನಿಷೇಧಿಸಿದೆ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್.ಟಿ.ಎ.) ಶಿಫಾರಸ್ಸಿನ ಮೇರೆಗೆ ಮಾಹಿತಿ ತಂತ್ರಜ್ಞಾನ ಸಚಿವಾಲಯ ಐಟಿ ಕಾಯ್ದೆ ಸೆಕ್ಷನ್ 69ಎ ಅಡಿ ಈ ಕ್ರಮ ಕೈಗೊಂಡಿದೆ.


ಹಳೆಯ ಸಂದೇಶಗಳನ್ನು ಎಡಿಟ್ ಮಾಡಿ ಸುಳ್ಳು ಸುದ್ದಿ ಹರಡುವುದನ್ನು ತಡೆಯಲು ಜೂ. 30ರ ವರೆಗೆ 'ಮೆಸೇಜ್ ಎಡಿಟಿಂಗ್' ವ್ಯವಸ್ಥೆಯನ್ನು ರದ್ದುಗೊಳಿಸಿದೆ.