ಭೌತಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ

ಲೋಕಬಂಧು ನ್ಯೂಸ್ | ಮಣಿಪಾಲ, ಜೂ.15
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಆಶ್ರಯದಲ್ಲಿ ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ ಸೋಮವಾರ ನಡೆಯಿತು.
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ)ಯ ಉಪನಿರ್ದೇಶಕ ಮಾರುತಿ ಅವರು ಕಾರ್ಯಾಗಾರ ಉದ್ಘಾಟಿಸಿದರು.


ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಡಾ. ದಯಾನಂದ ಪೈ ಅಧ್ಯಕ್ಷತೆ ವಹಿಸಿದ್ದರು.


ಬೆಂಗಳೂರು ಕೆಎಸ್ ಇಎಬಿ ಕಂಪ್ಯೂಟರ್ ಸೆಲ್ ಸಹಾಯಕ ನಿರ್ದೇಶಕ ಗಿರೀಶ ಸಿ. ಸಂಪನ್ಮೂಲ ವ್ಯಕ್ತಿಯಾಗಿದ್ದರು.


ಸಂಘದ ಉಪಾಧ್ಯಕ್ಷೆ ರೂಪ ಎಲ್. ಭಟ್, ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸಂಜೀವ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿಇಓ ದಿನೇಶ್ ಎಂ. ಕೊಡವೂರು, ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಪ್ರಾಂಶುಪಾಲ ಗಣೇಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.


ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕ ಸುರತ್ ಕುಮಾರ್ ಸ್ವಾಗತಿಸಿ, ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕ ಡಾ.ಪ್ರಜ್ವಲ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.