ಲೋಕಬಂಧು ನ್ಯೂಸ್ ಕಾರ್ಕಳ, ಜೂ.27
ಉಡುಪಿ ಜಿಲ್ಲಾ ಪೊಲೀಸ್ ಮತ್ತು ಕಾರ್ಕಳ ಪೊಲೀಸ್ ಇಲಾಖೆ ನೇತೃತ್ವದಲ್ಲಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ
ಜೂ. 29ರಂದು ಅಪರಾಹ್ನ 4 ಗಂಟೆಗೆ ಇಲ್ಲಿನ ಮಂಜುನಾಥ ಪೈ ಸಭಾಭವನದಲ್ಲಿ ನಡೆಯಲಿದೆ.ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,395 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು,ಅರ್ಜಿ ಸಲ್ಲಿಸಲು ಜುಲೈ 3 ಕೊನೆಯ ದಿನವಾಗಿದೆ.
ಪೊಲೀಸ್ ಇಲಾಖೆಗೆ ಕರಾವಳಿ ಭಾಗದ ಹೆಚ್ಚಿನ ಯುವಕ-ಯುವತಿಯರು ಆಯ್ಕೆಯಾಗಬೇಕೆಂಬ ಉದ್ದೇಶದಿಂದ ಅರ್ಜಿ ಸಲ್ಲಿಕೆ ಹಾಗೂ ಪರೀಕ್ಷಾ ವಿಧಾನದ ಬಗ್ಗೆ ಪೊಲೀಸ್ ಇಲಾಖೆಯ ಹಿರಿಯ, ಅನುಭವಿ ಅಧಿಕಾರಿಗಳು ಮಾಹಿತಿ ನೀಡಲಿದ್ದಾರೆ.
ಯುವಕ& ಯುವತಿಯರು, ವಿದ್ಯಾರ್ಥಿಗಳು ಹಾಗೂ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳುವಂತೆಚಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮತ್ತು ಕಾರ್ಕಳ ಡಿವೈಎಸ್‌ಪಿ ವಿಜಯ ಪ್ರಸಾದ್ ಹಾಗೂ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ಪ್ರಕಟಣೆ ತಿಳಿಸಿದೆ.