ಪ್ರಧಾನಿ ಮೋದಿ ದೀರ್ಘಾಯುಷ್ಯಕ್ಕಾಗಿ ಕೃಷ್ಣಮಠದಲ್ಲಿ ಪ್ರಾರ್ಥನೆ

ಲೋಕಬಂಧು ನ್ಯೂಸ್ | ಉಡುಪಿ, ಜೂ.10
ದಾಖಲೆಯ 4,339‌ನೇ ದಿನವನ್ನು ಪೂರೈಸಿ ಸತತ 12 ವರ್ಷಗಳ ದೀರ್ಘಾವಧಿ ಭಾರತದ ಪ್ರಧಾನ ಸೇವಕರಾಗಿ ಸೇವೆ ಸಲ್ಲಿಸಿದ ಪ್ರಧಾನಿ ನರೇಂದ್ರ ದಾಮೋದರ ದಾಸ್ ಮೋದಿ ಅವರಿಗೆ ದೀರ್ಘಾಯುಷ್ಯ ಕೋರಿ ಹಾಗೂ 2047ರ ವಿಕಸಿತ ಭಾರತದ ಸಂಕಲ್ಪ ಸಾಧನೆಯ‌‌ ಯಶಸ್ಸನ್ನು ಪ್ರಾರ್ಥಿಸಿ ಬುಧವಾರ ಶ್ರೀಕೃಷ್ಣಮಠದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಪರ್ಯಾಯ ಶೀರೂರು ಮಠದ ದಿವಾನ ಡಾ.ಉದಯ ಕುಮಾರ್ ಸರಳತ್ತಾಯ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ ನಾಯಕ್ ಮತ್ತು ದಿನಕರ ಶೆಟ್ಟಿ ಹೆರ್ಗ, ಜಿಲ್ಲಾ ವಕ್ತಾರ ಮಧುಕರ ಮುದ್ರಾಡಿ, ಸುಪ್ರಸಾದ್ ಶೆಟ್ಟಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ನಯನಾ ಗಣೇಶ್, ವೀಣಾ ಶೆಟ್ಟಿ, ಪ್ರಜ್ಞಾ ಶೆಟ್ಟಿ, ಪದ್ಮಾ ರತ್ನಾಕರ್, ಅಜಿತ್ ಪೈ, ಶಾಮ್ ಪ್ರಸಾದ್ ಕುಡ್ವ ಮೊದಲಾದವರಿದ್ದರು.