ಲೋಕಬಂಧು ನ್ಯೂಸ್ | ನವದೆಹಲಿ, ಜೂ.11
ಪ್ರಧಾನಿಯಾಗಿ 12 ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ತನ್ನ ಎಕ್ಸ್ ಖಾತೆಯಲ್ಲಿ ಜನಸೇವೆಯ ಮಹತ್ವದ ಬಗ್ಗೆ ಸಂದೇಶ ನೀಡಿದ್ದಾರೆ.
ನನ್ನ ಪ್ರಕಾರ, ಸಮರ್ಪಣಾ ಭಾವನೆ ಮತ್ತು ಕರ್ತವ್ಯ ಪ್ರಜ್ಞೆಯಿಂದ ನಿರಂತರವಾಗಿ ಕೆಲಸ ಮಾಡುವ ವ್ಯಕ್ತಿ ಮಾತ್ರ ಜನರ ವಿಶ್ವಾಸ ಗಳಿಸಲು ಸಾಧ್ಯ. ಸಾರ್ವಜನಿಕರು ನಿಮ್ಮನ್ನು ಒಪ್ಪಿಕೊಂಡರೆ ಅದಕ್ಕೆ ನೀವು ನೀಡುತ್ತಿರುವ ಆಡಳಿತವೇ ಮೂಲ ಕಾರಣ ಎಂದವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.