ಕೃಷ್ಣಮಠಕ್ಕೆ ರಘುವಿಜಯತೀರ್ಥರ ಭೇಟಿ

ಲೋಕಬಂಧು ನ್ಯೂಸ್ | ಉಡುಪಿ, ಜೂ.23
ಇಲ್ಲಿನ ಶ್ರೀಕೃಷ್ಣ ಮಠಕ್ಕೆ ಕೂಡ್ಲಿ ಆರ್ಯ ಅಕ್ಷೋಭ್ಯತೀರ್ಥ ಮೂಲ ಮಹಾಸಂಸ್ಥಾನದ ಶ್ರೀ ರಘುವಿಜಯತೀರ್ಥ ಶ್ರೀಪಾದರು ಭೇಟಿ ನೀಡಿ, ದೇವರ ದರ್ಶನ ಪಡೆದರು.ಶೀರೂರು ಮಠದ ಪರ್ಯಾಯದ ಅವಧಿಯಲ್ಲಿ ಮೊದಲ ಬಾರಿಗೆ ಆಗಮಿಸುತ್ತಿರುವ ಶ್ರೀಗಳನ್ನು ಮಠೀಯ ಸಂಪ್ರದಾಯದಂತೆ ಸ್ವಾಗತಿಸಲಾಯಿತು.


ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಕೃಷ್ಣ ದರ್ಶನ ಮಾಡಿಸಿದರು.


ಶೀರೂರು ಮಠದ ದಿವಾನ ಡಾ.ಉದಯ ಕುಮಾರ್ ಸರಳತ್ತಾಯ ಹಾಗೂ ಪಾರುಪತ್ಯೆಗಾರ ಶ್ರೀಶ ಭಟ್ ಕಡೆಕಾರು ಇದ್ದರು.