ಲೋಕಬಂಧು ನ್ಯೂಸ್ ಬೆಂಗಳೂರು, ಜೂ. 6
ಡಿ.ಕೆ. ಶಿವಕುಮಾರ್ ನೇತೃತ್ವದ ಸರಕಾರದಲ್ಲಿ ಮುಖ್ಯಮಂತ್ರಿಯೊಂದಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ, ಬಳಿಕ 48 ಗಂಟೆಯೊಳಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗ ರೆಡ್ಡಿ ಶನಿವಾರ ತನ್ನ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು, ರಾಮಲಿಂಗ ರೆಡ್ಡಿ ಮನವೊಲಿಸುವಲ್ಲಿ ಸಫಲರಾಗಿದ್ದೇವೆ. ಸಚಿವ ಸ್ಥಾನಕ್ಕೆ ಅವರು ನೀಡಿದ್ದ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ ಎಂದು ಹೇಳಿದರು.
ಇನ್ನು ಮುಂದೆ ಅವರು ಡಿ.ಕೆ. ಶಿವಕುಮಾರ್ ಸಚಿವ ಸಂಪುಟದಲ್ಲಿ ಮುಂದುವರಿದು, ಕಾರ್ಯನಿರ್ವಹಿಸಲಿದ್ದಾರೆ ಎಂದು ಸುರ್ಜೇವಾಲ ಸ್ಪಷ್ಟಪಡಿಸಿದರು.