ರೈತರ ಬೇಡಿಕೆಗಳಿಗೆ ಸ್ಪಂದಿಸಿ

ಲೋಕಬಂಧು ನ್ಯೂಸ್ | ಉಡುಪಿ, ಜೂ.15
ಮುಂಗಾರು ಮಳೆ ಆರಂಭವಾಗಿದ್ದು ರೈತರ ಬೇಡಿಕೆಗೆಗೆ ಅನುಗುಣವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಪೂರೈಸುವಂತೆ ಕೃಷಿ ಇಲಾಖಾಧಿಕಾರಿ ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ ಸೂಚಿಸಿದರು.
ಸೋಮವಾರ ಇಲ್ಲಿನ ತಾ.ಪಂ. ಸಭಾಂಗಣದಲ್ಲಿ ನಡೆದ ಉಡುಪಿ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ವೈದ್ಯಕೀಯ ಹಿತದೃಷ್ಟಿಯಿಂದ ಬಿಪಿಎಲ್ ಪಡಿತರ ಚೀಟಿಗಳನ್ನು ವಿಳಂಬ ಮಾಡದೆ ಶೀಘ್ರವೇ ಒದಗಿಸಿಕೊಡುವ ಬಗ್ಗೆ ಸೂಚಿಸಿದರು.


ಮಳೆಗಾಲದಲ್ಲಿ ರಸ್ತೆ ನೀರು ಸರಾಗವಾಗಿ ಹರಿದು ಹೋಗಲು ಚರಂಡಿ ನಿರ್ಮಾಣ ಹಾಗೂ ಚರಂಡಿಗಳ ಹೂಳು ವಿಲೇವಾರಿಗೊಳಿಸುವಂತೆ ಲೋಕೋಪಯೋಗಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖಾಧಿಕಾರಿಗಳಿಗೆ ಸೂಚಿಸಿದರು.


ಶಿಥಿಲಗೊಂಡಿರುವ ಸರಕಾರಿ ಶಾಲೆಗಳನ್ನು ಗುರುತಿಸಿ ಅಂಥ ಶಾಲೆಗಳ ದುರಸ್ತಿಗೆ ಅಗತ್ಯ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಇಲಾಖಾಧಿಕಾರಿಗಳಿಗೆ ತಿಳಿಸಿದರು.


ಉಡುಪಿ ಶಾಸಕ ಯಶಪಾಲ್ ಸುವರ್ಣ, ಉಡುಪಿ ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಉಡುಪಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವಿಜಯಾ, ತಹಶೀಲ್ದಾರ್ ಗುರುರಾಜ್, ಉಡುಪಿ ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ ಹಾಗೂ ಉಡುಪಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.