ಲೋಕಬಂಧು ನ್ಯೂಸ್ | ಮಣಿಪಾಲ, ಜೂ.25
ಇಲ್ಲಿಗೆ ಸಮೀಪದ ಖಾಸಗಿ ಶಾಲಾ ಮಕ್ಕಳ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ ಢಿಕ್ಕಿಯಾದ ಘಟನೆ ಮಣಿಪಾಲ ಕೆ.ಎಫ್.ಸಿ ಬಳಿ ಗುರುವಾರ ಸಂಭವಿಸಿದೆ.
ಅಲ್-ಇಬಾದಾದ್ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್ ಅದಾಗಿದೆ.
ಘಟನೆಯಿಂದಾಗಿ ಬಸ್ಸಿನಲ್ಲಿದ್ದ ಶಾಲಾ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಡಿವೈಡರ್ ಹಾಗೂ ಬಸ್ಸಿಗೆ ಹಾನಿಯಾಗಿದೆ.
ಸ್ಥಳಕ್ಕೆ ಮಣಿಪಾಲ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
