ಎಸ್.ಎಸ್.ಎಲ್.ಸಿ. ಪರೀಕ್ಷೆ: ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಜಿ. ಮಾಧುರ್ಯಗೆ ಸನ್ಮಾನ

ಲೋಕಬಂಧು ನ್ಯೂಸ್ | ಉಜಿರೆ, ಜೂ.10
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ–2ರಲ್ಲಿ ಧರ್ಮಸ್ಥಳದ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಜಿ. ಮಾಧುರ್ಯ 625ಕ್ಕೆ 625 ಅಂಕ ಗಳಿಸಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಅವರನ್ನು ಅಭಿನಂದಿಸಲಾಯಿತು.
ಮಾಧುರ್ಯ ಅವರು ಧರ್ಮಸ್ಥಳದ ಅನ್ನಪೂರ್ಣ ಛತ್ರದ ಪ್ರಬಂಧಕ ಸುಬ್ರಹ್ಮಣ್ಯ ಪ್ರಸಾದ್ ಹಾಗೂ ಮಧುರಾ ದಂಪತಿ ಪುತ್ರಿ.


ಮಾಧುರ್ಯಳ ಸಾಧನೆಯನ್ನು ಅಭಿನಂದಿಸಿ, ಜೂ. 8ರಂದು ಧರ್ಮಸ್ಥಳ ಅನ್ನಪೂರ್ಣ ಛತ್ರದ ಹಿರಿಯ ಸಿಬ್ಬಂದಿಗಳಾದ ಭರತ್‌ರಾಜ್ ಜೈನ್, ಶ್ರೇಣಿಕ್, ರಾಜು ಸಪಲ್ಯ, ದೇವಿಪ್ರಸಾದ್, ಅಪ್ಪು ಬಿ., ಬಾಬು ಬಿ., ಉಮೇಶ ಎಂ., ಬಾಲಕೃಷ್ಣ ಶೆಟ್ಟಿ ಮೊದಲಾದವರು ಸನ್ಮಾನಿಸಿ, ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಸಿಬ್ಬಂದಿಗಳು, ಮಾಧುರ್ಯಳ ಸಾಧನೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದು, ಮುಂದಿನ ವಿದ್ಯಾಭ್ಯಾಸದಲ್ಲಿಯೂ ಇದೇ ರೀತಿ ಉನ್ನತ ಸಾಧನೆ ಮಾಡಿ ಕುಟುಂಬ, ಶಾಲೆ ಹಾಗೂ ಸಮಾಜಕ್ಕೆ ಕೀರ್ತಿ ತರಲಿ ಎಂದು ಹಾರೈಸಿದರು.