ಲೋಕಬಂಧು ನ್ಯೂಸ್ | ಉಡುಪಿ, ಜೂ.30
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿಯ ಅನಾವರಣ ಇಂದಿನ ತುರ್ತು ಅಗತ್ಯ ಎಂದು ಕೇಂದ್ರ ಆಯುರ್ವೇದೀಯ ವಿಜ್ಞಾನ ಅನುಸಂಧಾನ ಪರಿಷತ್ ಸಂಸ್ಥೆ ಉಪ ಮಹಾನಿರ್ದೇಶಕ ನಾರಾಯಣಮ್ ಶ್ರೀಕಾಂತ್ ಹೇಳಿದರು.
ಗೀತಾ ಮಂದಿರದ ಶ್ರೀಪುತ್ತಿಗೆ ನೃಸಿಂಹ ಸಭಾಭವನದಲ್ಲಿ ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನ, ಕೇಂದ್ರ ಸರಕಾರದ ಅಧೀನದ ಹೊಸದಿಲ್ಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಹಾಗೂ ಕೇಂದ್ರೀಯ ಆಯುರ್ವೇದೀಯ ವಿಜ್ಞಾನ ಅನುಸಂಧಾನ ಪರಿಷತ್ ಸಹಭಾಗಿತ್ವದಲ್ಲಿ ಎರಡು ವಾರ ನಡೆದ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಸಾಮರ್ಥ್ಯ ನಿರ್ಮಾಣ ಕಾರ್ಯಾಗಾರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಿರಿಯ ವಿದ್ವಾಂಸ ಡಾ.ಪಾದೆಕಲ್ಲು ವಿಷ್ಣು ಭಟ್ ಮುಖ್ಯ ಅತಿಥಿಯಾಗಿದ್ದರು. ಬೆಂಗಳೂರಿನ ಕೇಂದ್ರೀಯ ಆಯುರ್ವೇದ ಸಂಸ್ಥೆ ನಿರ್ದೇಶಕ ಡಾ.ಟಿ. ಮಹೇಶ್ವರ್ ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿ ಹೊಸದಿಲ್ಲಿಯ ಸಂಸ್ಕೃತ ವಿದ್ವಾಂಸ ಡಾ.ದಿಲೀಪ್ ಕುಮಾರ್ಕಾರ್ ಅವರನ್ನು ಸನ್ಮಾನಿಸಲಾಯಿತು.
ಉಡುಪಿಯ ಪ್ರಾಚ್ಯ ಸಂಚಯ ಪ್ರತಿಷ್ಠಾನದ ಡಾ.ಕೃಷ್ಣಯ್ಯ, ತುಳು ಲಿಪಿ ವಿದ್ವಾಂಸ 'ಸುಗುಣಮಾಲಾ' ಸಂಪಾದಕ ಮಹಿತೋಷ್ ಆಚಾರ್ಯ, ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀನಿಕೇತನ ಸಂಶೋಧನ ಕೇಂದ್ರದ ನಿರ್ದೇಶಕ ಡಾ.ಜಿ.ವಿ.ಕಲ್ಹಾಪುರೆ, ಬೆಂಗಳೂರಿನ ಡಾ.ಸದ್ಯೋಜಾತ ಭಟ್ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.
ವಾದಿರಾಜ ಸಂಶೋಧನ ಪ್ರತಿಷ್ಠಾನದ ವಿದ್ವಾನ್ ಶ್ರೀಧರ ಆಚಾರ್ಯ ಸಂಯೋಜಕರಾಗಿದ್ದರು. ಸಂಘಟಕ, ವಾದಿರಾಜ ಸಂಶೋಧನ ಪ್ರತಿಷ್ಠಾನದ ನಿರ್ದೇಶಕ ಡಾ.ಬಿ.ಗೋಪಾಲಾಚಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
.jpg)
.jpg)
.jpg)
.jpg)