ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಲೋಕಬಂಧು ನ್ಯೂಸ್ | ಉಡುಪಿ, ಜೂ.14
ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಮತ್ತು ಕೇಂದ್ರೀಯ ಆಯುರ್ವೇದೀಯ ವಿಜ್ಞಾನ ಅನುಸಂಧಾನ ಪರಿಷತ್ ನೇತೃತ್ವದಲ್ಲಿ ಉಡುಪಿ ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನ ಸಹಯೋಗದೊಂದಿಗೆ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ಆಶಯದಂತೆ ಕರಾವಳಿ ಕರ್ನಾಟಕ ಪ್ರದೇಶದಲ್ಲಿ ದೊರೆಯುವ ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ ಗೀತಾ ಮಂದಿರದ ಪುತ್ತಿಗೆ ಶ್ರೀ ನೃಸಿಂಹ ಸಭಾಭವನದಲ್ಲಿ ಭಾನುವಾರ ನಡೆಯಿತು.
ಭಾರತ ಸರಕಾರದ ಆಯುಷ್ ಸಚಿವಾಲಯದ ಕೇಂದ್ರೀಯ ಆಯುರ್ವೇದ ವಿಜ್ಞಾನ ಸಂಶೋಧನಾ ಮಂಡಳಿ ಮಹಾನಿರ್ದೇಶಕ ಪ್ರೊ. ವೈದ್ಯ ರಬಿನಾರಾಯಣ ಆಚಾರ್ಯ ಕಾರ್ಯಾಗಾರ ಉದ್ಘಾಟಿಸಿ, ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಜ್ಞಾನ ಭಾರತಂ ಮಿಶನ್ ಯೋಜನೆಯಡಿ ಈಗಾಗಲೇ ದೇಶದಾದ್ಯಂತ ಒಂದು ಕೋಟಿಗೂ ಅಧಿಕ ಸಂಖ್ಯೆಯ ಹಸ್ತಪ್ರತಿಗಳ ಸರ್ವೇ ಮಾಡಲಾಗಿದೆ. ವಿವಿಧ ಭಾಷೆಗಳಲ್ಲಿರುವ ವಿವಿಧ ವಿಷಯಗಳ ಹಸ್ತಪ್ರತಿಗಳ ಲಿಪ್ಯಂತರ ಕಾರ್ಯಕ್ರಮ ನಡೆಯುತ್ತಿದೆ ಎಂದರು.


ತೆಲಂಗಾಣದ ಹೈದರಾಬಾದ್‌‌ನಲ್ಲಿರುವ ರಾಷ್ಟ್ರೀಯ ಭಾರತೀಯ ವೈದ್ಯಕೀಯ ಪರಂಪರೆ ಸಂಸ್ಥೆಯ ಸಹಾಯಕ ನಿರ್ದೇಶಕ ಡಾ.ಜಿ.ಪಿ. ಪ್ರಸಾದ್, ನಿಟ್ಟೆ ವಿಶ್ವವಿದ್ಯಾಲಯದ ಐಕೆಎಸ್ ಕೇಂದ್ರದ ನಿರ್ದೇಶಕ ಡಾ.ಸುಧೀರ್ ರಾಜ್ ಕೆ. ಮುಖ್ಯ ಅತಿಥಿಗಳಾಗಿದ್ದರು.


ಪುತ್ತಿಗೆ ಮಠದ ಆಡಳಿತಾಧಿಕಾರಿ ಹಾಗೂ ದಿವಾನ ನಾಗರಾಜ ಆಚಾರ್ಯ, ಕೇಂದ್ರೀಯ ಆಯುರ್ವೇದೀಯ ಅನುಸಂಧಾನ ಸಂಸ್ಥಾನ, ಬೆಂಗಳೂರು ವಿಭಾಗ ಸಹಾಯಕ ನಿರ್ದೇಶಕ ಡಾ.ಮಹೇಶ್ವರ ಟಿ, ರಾಜಸ್ಥಾನದ ಎಂ.ಎಸ್.ಪ್ರಾದೇಶಿಕ ಆಯುರ್ವೇದ ಸಂಶೋಧನಾ ಸಂಸ್ಥೆಯ ಸಂಶೋಧನಾ ಅಧಿಕಾರಿ ಡಾ.ವಿನೋದ್ ಕುಮಾರ್ ಲಾವಣಿಯಾ, ನವದೆಹಲಿಯ ಇಂದಿರಾಗಾಂಧಿ ರಾಷ್ಟ್ರೀಯ ಕಲಾಕೆಂದ್ರದ ಭಾಷಾ ವಿದ್ವಾಂಸ ಡಾ.ಕೀರ್ತಿಕಾಂತ್ ಶರ್ಮಾ, ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಡಾ.ಆರ್.ಎಲ್. ನಾರಾಯಣ ಸಿಂಹ ಮತ್ತು ಡಾ.ದಿಲೀಪ್ ಕುಮಾರ್, ಉದ್ಯಾವರ ಎಸ್.ಡಿಎಂ ಆಯುರ್ವೇದ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ಮಹಾಲಕ್ಷ್ಮಿ ಎಂ. ಎಸ್., ಡಾ.ದೀಕ್ಷಿತಾ ಹೆಬ್ಬಾರ್ ಮತ್ತು ಡಾ.ಸುದರ್ಶನ್ ಹಾಗೂ ಪುತ್ತಿಗೆ ವಿದ್ಯಾಪೀಠದ ವಿದ್ವಾಂಸ ಡಾ.ಸುನಿಲ್ ಆಚಾರ್ಯ, ಸುಗುಣಮಾಲಾ ಪತ್ರಿಕೆ ಸಂಪಾದಕ ಮಹಿತೋಷ ಆಚಾರ್ಯ, ಉಡುಪಿ ಪ್ರಾಚ್ಯ ಸಂಚಯ ಸಂಶೋಧನ ಕೇಂದ್ರದ ನಿರ್ದೇಶಕ ಡಾ.ಎಸ್.ಎ. ಕೃಷ್ಣಯ್ಯ ಮೊದಲಾದವರಿದ್ದರು.


ಶ್ರೀ ವಾದಿರಾಜ ಸಂಶೋಧನ ಕೇಂದ್ರ ನಿರ್ದೇಶಕ ಡಾ.ಗೋಪಾಲಾಚಾರ್ಯ ನಿರೂಪಿಸಿದರು.