ಲೋಕಬಂಧು ನ್ಯೂಸ್ ಕಾಪು, ಜೂ.21
ಬಿಜೆಪಿ ಯುವ ಮೋರ್ಚಾ ಕಾಪು ಮಂಡಲ ನೇತೃತ್ವದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಭಾನುವಾರ ಅಂಗವಾಗಿ ಓಶಿಯನ್ ಬೀಚ್ ರೆಸಾರ್ಟ್'ನಲ್ಲಿ ನಡೆಸಲಾಯಿತು.ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾರ್ರಕ್ರಮ ಉದ್ಘಾಟಿಸಿ, ನಿರಂತರ ಯೋಗಾಭ್ಯಾಸದಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಲು ಸಾಧ್ಯ ಎಂದರು.ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸೋನು ಪಾಂಗಾಳ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಕಾಪು ಪುರಸಭೆಯ ಸದಸ್ಯ ನಿತಿನ್, ಹಿರಿಯ ಕಾರ್ಯಕರ್ತ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ, ನಿವೃತ್ತ ಸೈನಿಕ ಕುಶ ಸಾಲ್ಯಾನ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್ ಮತ್ತು ಶರಣ್ ಕುಮಾರ್ ಮಟ್ಟು ಇದ್ದರು.ಬಳಿಕ ಯೋಗಾಸನ ಮಾಡಲಾಯಿತು.