ಲೋಕಬಂಧು ನ್ಯೂಸ್ ಮಂಗಳೂರು, ಜು.20
ರಾಜ್ಯ ಕಂಬಳ ಅಸೋಸಿಯೇಶನ್ ಸಹಯೋಗದೊಂದಿಗೆ 2025- 26ನೇ ಸಾಲಿನಲ್ಲಿ ಕರಾವಳಿಯಲ್ಲಿ ನಡೆದ 23 ಕಂಬಳಗಳಿಗೆ ತಲಾ 5 ಲಕ್ಷ ರೂ.ಗಳಂತೆ ಒಟ್ಟು 1.15 ಕೋ. ರೂ. ಅನುದಾನವನ್ನು ರಾಜ್ಯ ಸರಕಾರ ನೀಡಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಐಕಳಬಾವ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದ್ದಾರೆ.ರಾಜ್ಯ ಸರಕಾರ ನುಡಿದಂತೆ ನಡೆದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್, ಹಿಂದಿನ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್, ಸಚಿವ ಯು.ಟಿ.ಖಾದರ್, ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ಅವರ ಸಹಕಾರದಿಂದ ಅನುದಾನ ಮಂಜೂರಾಗಿದೆ ಎಂದರು.
ಮುಂದಿನ ಬಜೆಟ್‌ನಲ್ಲಿ ಕಂಬಳಕ್ಕೆ 5 ಕೋ.ರೂ. ನೀಡುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಶ್ವಾಸನೆ ನೀಡಿದ್ದಾರೆ. ಕಂಬಳ ರಾಜ್ಯದ ಕ್ರೀಡೆಯಾಗಿ ಅಸೋಸಿಯೇಶನ್ ಆರಂಭವಾದ ಬಳಿಕ ಕ್ರೀಡಾ ಇಲಾಖೆ, ಅಅನುದಾನ ದೊರೆಯುತ್ತಿರುವುದು ಕಂಬಳಕ್ಕೆ ಹೊಸ ಸ್ಫೂರ್ತಿ ಸಿಕ್ಕಿದಂತಾಗಿದೆ ಎಂದರು.