ಜು.23ರಂದು ದ.ಕ. ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಲೋಕಬಂಧು ನ್ಯೂಸ್ | ಮಂಗಳೂರು, ಜು.22
ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ  ಜು.23ರಂದು ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಂತ ಬುಧವಾರ ಸಂಜೆಯಿಂದ ಎಡೆಬಿಡದೆ ಮಳೆಯಾಗುತ್ತಿದ್ದು, ಆ ಹಿನ್ನೆಲೆಯಲ್ಲಿ ಗುರುವಾರಂದು ಜಿಲ್ಲೆಯ ಎಲ್ಲ ಅಂಗನವಾಡಿಗಳು, ಅನುದಾನಿತ ಮತ್ತು ಸರಕಾರಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ನೀಡಿ ಜಿಲ್ಲಾಧಿಕಾರಿ ದರ್ಶನ್ ಅವರು ಆದೇಶ ಮಾಡಿದ್ದಾರೆ.