ಜು.4-6: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಸಚಿವ ಖಾದರ್ ಪ್ರವಾಸ

ಲೋಕಬಂಧು ನ್ಯೂಸ್ | ಮಂಗಳೂರು, ಜು.3
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಯು.ಟಿ. ಖಾದರ್ ಅವರು ಜುಲೈ 4ರಿಂದ 6ರ ವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಅವರು ಈ ಚತುರ್ಜಿಲ್ಲೆಗಳ ಉಸ್ತುವಾರಿ ಸಚಿವರಾಗಿದ್ದಾರೆ.


ಜು.4ರಂದು ಬೆಳಿಗ್ಗೆ 10.30 ಕಾರವಾರದಲ್ಲಿ ಹಾಗೂ ಅಪರಾಹ್ನ 4.30 ಗಂಟೆಗೆ ಪ್ರಗತಿ ಪರಿಶೀಲನ ಸಭೆ ನಡೆಸಲಿದ್ದಾರೆ. ರಾತ್ರಿ 8.15 ಗಂಟೆಗೆ ಮಂಗಳೂರಿನ ಐ.ಎಂ.ಎ ಹಾಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.


ಜು.5ರಂದು ಬೆಳಿಗ್ಗೆ 10ಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ, ಮಧ್ಯಾಹ್ನ 12:30ಕ್ಕೆ ಮಂಗಳೂರಿನಿಂದ ಕೊಡಗು ಜಿಲ್ಲೆಗೆ ತೆರಳುವರು.


ಜು.6ರಂದು ಬೆಳಿಗ್ಗೆ 10.30 ಗಂಟೆಗೆ ಸುಳ್ಯದಲ್ಲಿ ಸ್ಥಳೀಯ ಕಾರ್ಯಕ್ರಮ, ಸಂಜೆ 5 ಗಂಟೆಗೆ ಮಂಗಳೂರಿನಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು.