ಲೋಕಬಂಧು ನ್ಯೂಸ್ ನವದೆಹಲಿ, ಜು.22
ಕಳೆದ 5 ವರ್ಷಗಳಲ್ಲಿ ಮೂರು ಬಾರಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಅದಕ್ಕೆ ಹೊಣೆಗಾರರು ಯಾರು ಎಂದು ಕೇಂದ್ರ ಸರ್ಕಾರವನ್ನು ಬಿಜೆಪಿ ಮಾಜಿ ನಾಯಕ ಕೆ.ಅಣ್ಣಾಮಲೈ ಪ್ರಶ್ನಿಸಿದ್ದಾರೆ.ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅಣ್ಣಾಮಲೈ, ಪ್ರತಿಭಟನಾಕಾರರೊಂದಿಗೆ ಮಾತನಾಡಲು ಕೇಂದ್ರ ಸರ್ಕಾರ ಏಕೆ ಇಷ್ಟೊಂದು ತಡ ಮಾಡಿದೆ. ಪ್ರತಿಭಟನೆ ತೀವ್ರ ಹಂತಕ್ಕೆ ತಲುಪುವ ವರೆಗೆ ಅರ್ಥಪೂರ್ಣ ಮಾತುಕತೆ ಏಕೆ ವಿಳಂಬವಾಯಿತು? ನಿಮ್ಮನ್ನು ಕಾಯುವಂತೆ ಮಾಡಿದ್ದು ಏನು ಎಂದು ಪ್ರಶ್ನಿಸುವ ಮೂಲಕ ಕೇಂದ್ರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.