ಮುಖ್ಯಮಂತ್ರಿ ಮಾಧ್ಯಮ ಕಾರ್ಯದರ್ಶಿಗಳಾಗಿ ಮೂವರ ನೇಮಕ

ಲೋಕಬಂಧು ನ್ಯೂಸ್ | ಬೆಂಗಳೂರು, ಜು.9
ರಾಜ್ಯ ಸರಕಾರ ಮುಖ್ಯಮಂತ್ರಿ ಸಚಿವಾಲಯಕ್ಕೆ ಮೂವರು ನೂತನ ಮಾಧ್ಯಮ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಜು.8ರಂದು ಬುಧವಾರ ಆದೇಶ ಹೊರಡಿಸಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಗಾಯತ್ರಿ ಜಿ.ಎನ್‌. ಅಧಿಸೂಚನೆ ಪ್ರಕಟಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಮೂವರನ್ನು ನೇಮಕ ಮಾಡಲಾಗಿದೆ.


ನೇಮಕಗೊಂಡವರು
ಪಿ.ತ್ಯಾಗರಾಜ್- ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಅವರ ಮಾಧ್ಯಮ ಕಾರ್ಯದರ್ಶಿ-1, ಆರ್.ಜಯಪ್ರಕಾಶ್- ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ-2 ಹಾಗೂ ರಾಘವೇಂದ್ರ ಭಟ್‌- ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ- 3 ಹುದ್ದೆಗೆ ನೇಮಕ ಮಾಡಲಾಗಿದೆ.


ಕೆಯುಡಬ್ಲ್ಯೂಜೆ ಅಭಿನಂದನೆ
ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿಗಳನ್ನಾಗಿ ಮೂವರು ಹಿರಿಯ ಪತ್ರಕರ್ತರ ನೇಮಕವನ್ನು ಸ್ವಾಗತಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ), ಇವರ ಅವಧಿಯಲ್ಲಿ ಮಾಧ್ಯಮ ಕ್ಷೇತ್ರದ ಪೂರಕ ಕಾರ್ಯಕ್ರಮ ಜಾರಿಯಾಗಲಿ ಹಾಗೂ ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸಕ್ಕೆ ಹೆಚ್ಚಿನ ಆದ್ಯತೆ ಸಿಗಲಿ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆಶಿಸಿ, ಅಭಿನಂದಿಸಿದ್ದಾರೆ.