ಲೋಕಬಂಧು ನ್ಯೂಸ್ ಲಖನೌ, ಜು.6
ಅಯೋಧ್ಯೆಯ ಶ್ರೀರಾಮ ಮಂದಿರದ ದೇಣಿಗೆ ಲೂಟಿ ಪ್ರಕರಣದ ನಡುವೆಯೇ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನಲ್ಲಿ ಪ್ರಮುಖ ಆಡಳಿತಾತ್ಮಕ ಬದಲಾವಣೆಯಾಗಿದೆ. ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆಯನ್ನು ಸೋಮವಾರ ನಡೆದ ಟ್ರಸ್ಟ್ ಸಭೆಯಲ್ಲಿ ಅಂಗೀಕರಿಸಲಾಗಿದ್ದು ಬಜರಂಗ್ ಬಾಗ್ರಾ ಅವರನ್ನು ಹೊಸ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲು ಸಿದ್ಧತೆ ನಡೆದಿದೆ.ಟ್ರಸ್ಟ್‌ನಿಂದ ಔಪಚಾರಿಕ ಘೋಷಣೆ ನಂತರವೇ ಅಂತಿಮ ವಿವರ ಸ್ಪಷ್ಟವಾಗುತ್ತವೆ. ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದ ಕುರಿತು ಅಧಿಕೃತ ಹೇಳಿಕೆ ಶೀಘ್ರದಲ್ಲೇ ನಿರೀಕ್ಷಿಸಲಾಗಿದೆ.
ರಾಮ ಜನ್ಮಭೂಮಿ ಸಂಕೀರ್ಣದೊಳಗಿನ ಅತಿಥಿಗೃಹದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಡಾ. ಅನಿಲ್ ಮಿಶ್ರಾ ರಾಜೀನಾಮೆಯನ್ನು ಅಂಗೀಕರಿಸಲಾಯಿತು.