ಲೋಕಬಂಧು ನ್ಯೂಸ್ ಶಿವಮೊಗ್ಗ, ಜು.7
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್ಐಆರ್) ಕರ್ತವ್ಯದ ವೇಳೆಯಲ್ಲೇ ಹೃದಯಾಘಾತದಿಂದ ಬಿಎಲ್ಓ ಸಾವನ್ನಪ್ಪಿರುವ ಘಟನೆ ಭದ್ರಾವತಿ ತಾಲೂಕಿನ ಕಲ್ಲಾಪುರ ಗ್ರಾಮದಲ್ಲಿ ನಡೆದಿದೆ.ಮೃತರನ್ನು ಭದ್ರಾವತಿ ತಾಲೂಕಿನ ಕಲ್ಲಾಪುರದ ಅಂಗನವಾಡಿ ಶಿಕ್ಷಕಿ 52ರ ಹರೆಯದ ಮಂಜುಳಾ ಎಂದು ಗುರುತಿಸಲಾಗಿದೆ.
ಅರಕೆರೆ ಪಂಚಾಯತ್ ವ್ಯಾಪ್ತಿಯ ಕೋಡಿಹೊಸೂರಿನಲ್ಲಿ ಮನೆ ಮನೆಗೆ ತೆರಳಿ ಎಸ್ಐಆರ್ ಪ್ರಕ್ರಿಯೆ ನಡೆಸುತ್ತಿದ್ದ ವೇಳೆ ಹೃದಯಾಘಾತವಾಗಿ ಮಂಜುಳಾ ಕುಸಿದುಬಿದ್ದರು.
ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪ್ರಯೋಜನವಾಗಲಿಲ್ಲ.
ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.