ಲೋಕಬಂಧು ನ್ಯೂಸ್ | ಬೆಂಗಳೂರು, ಜು.18
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಜುಲೈ 15ರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಕೊನೆಯುಸಿರೆಳೆದಿದ್ದಾರೆ.
ಉಸಿರಾಟದ ಸಮಸ್ಯೆಯಿಂದಾಗಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯ ಡಾ.ಸತ್ಯನಾರಾಯಣ ಅವರು ಚೆನ್ನಮ್ಮ ಅವರಿಗೆ ಚಿಕಿತ್ಸೆ ನೀಡುತ್ತಿದ್ದರು.
ಸಂತಾಪ
ಚನ್ನಮ್ಮ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ, ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಜೆಡಿಎಸ್ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಮೊದಲಾದವರು ಸಂತಾಪ ವ್ಯಕ್ತಪಡಿಸಿದ್ದಾರೆ.