ಲೋಕಬಂಧು ನ್ಯೂಸ್ ಬ್ರಹ್ಮಾವರ, ಜು.2
ಗೆಳೆಯರ ಬಳಗ ಕನ್ನಾರು ನೇತೃತ್ವದಲ್ಲಿ ಉಡುಪಿಯ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಿಂದ ನಡೆದ ಉಚಿತ ನೇತ್ರ ತಪಾಸಣೆ ಶಿಬಿರದ ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಿಸಲಾಯಿತು.ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಡಾ.ಕೃಷ್ಣಪ್ರಸಾದ್ ಕೂಡ್ಲು ಅವರ ತಂಡ ಹಳ್ಳಿ ಹಳ್ಫಿಗಳಿಗೆ ತೆರಳಿ ಉಚಿತ ನೇತ್ರ ತಪಾಸಣೆ ಶಿಬಿರ ಆಯೋಜಿಸುವುದರಿಂದ ನಿರ್ಗತಿಕರು ಹಾಗೂ ಅಸಹಾಯಕರಿಗೆ ಮನೆ ಬಾಗಿಲಿಗೆ ಹೋಗಿ ಸಹಾಯ ಮಾಡಿದಂತಾಗುತ್ತದೆ. ಆ ಮೂಲಕ ಡಾ.ಕೃಷ್ಣಪ್ರಸಾದ್ ಅದೆಷ್ಟೋ ಜನರ ಬಾಳಲ್ಲಿ ಬೆಳಕಾಗಿದ್ದಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಡಾ.ಕೃಷ್ಣಪ್ರಸಾದ್ ಕೂಡ್ಲು ಮಾತನಾಡಿ, ಸಂಸದ ಶ್ರೀ ನಿವಾಸ ಪೂಜಾರಿ ಸೂಚಿಸಿದ ಸ್ಥಳಗಳಿಗೆ ತೆರಳಿ ಉಚಿತ ಶಿಬಿರ ಮತ್ತು ಅವರು ಗುರುತಿಸಿದ ಬಡ ವಿದ್ಯಾರ್ಥಿಗಳಿಗೆ ಉಚಿತ ಕಣ್ಣಿನ ಶಿಕ್ಷಣ ನೀಡುವುದಾಗಿ ಭರವಸೆ ನೀಡಿದರು.
ಸುಮಾರು 150 ಕನ್ನಡಕಗಳನ್ನು ಪ್ರಸಾದ್ ನೇತ್ರಾಲಯ ಹಾಗೂ ನೇತ್ರಜ್ಯೋತಿ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಉಚಿತವಾಗಿ ನೀಡಲಾಯಿತು.
ಈ ಸಂದರ್ಭದಲ್ಲಿ ಡಾ.ಕೃಷ್ಣಪ್ರಸಾದ್ ಕೂಡ್ಲು ಅವರನ್ನು ಸನ್ಮಾನಿಸಲಾಯಿತು.
ಗೆಳೆಯರ ಬಳಗ ಕನ್ನಾರು ಅಧ್ಯಕ್ಷ ಭಾಸ್ಕರ ಆಚಾರ್ಯ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪ್ರತಾಪ್ ಹೆಗ್ಡೆ ಮಾರಾಳಿ, ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಬಿರ್ತಿ ರಾಜೇಶ್ ಶೆಟ್ಟಿ, ಉದ್ಯಮಿ ಧನಂಜಯ ಅಮೀನ್, ತಾಲೂಕು ಉತ್ಪನ್ನ ಮಾರಾಟ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಮೈರ್ಮಾಡಿ, ಚೇರ್ಕಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಹರೀಶ್ ಶೆಟ್ಟಿ, ಚೇರ್ಕಾಡಿ ಗ್ರಾ.ಪಂ. ಮಾಜಿ ಸದಸ್ಯರಾದ ರಾಧಾಕೃಷ್ಣ ಸಾಮಂತ ಮತ್ತು ರಾಜು ಮಡಿವಾಳ, ಗೌರವ ಅಧ್ಯಕ್ಷ ಶೇಖರ್ ಕುಲಾಲ್ ಕನ್ನಾರು, ಕಾರ್ಯಕ್ರಮ ಸಂಚಾಲಕ ಸುರೇಶ ಆಚಾರ್ಯ ಪೇತ್ರಿ ಇದ್ದರು.
ಸಂಘದ ಖಜಾಂಚಿ ಸಂತೋಷ ನಾಯ್ಕ ಕನ್ನಾರ ಸನ್ಮಾನ ಪತ್ರ ವಾಚಿಸಿದರು. ಕಾರ್ಯಕ್ರಮ ಸಹ ಸಂಚಾಲಕ ಗಣೇಶ್ ಕುಲಾಲ್ ಆರೂರು ಸ್ವಾಗತಿಸಿ. ಉಮೇಶ್ ಪೂಜಾರ್ ಬ್ರಹ್ಮಾವರ ನಿರೂಪಿಸಿ ,ವಂದಿಸಿದರು.