ಲೋಕಬಂಧು ನ್ಯೂಸ್ | ಬೆಂಗಳೂರು, ಜು.3
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪತ್ನಿ ಉಷಾ ಡಿ.ಕೆ. ಶಿವಕುಮಾರ್ ಹಾಗೂ ಸಹೋದರ ಡಿ.ಕೆ. ಸುರೇಶ್ ಶುಕ್ರವಾರ ಬೆಳಿಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಉಪಾಹಾರದ ಜೊತೆಗೆ ಅನೌಪಚಾರಿಕ ಮಾತುಕತೆ ನಡೆಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಕೆಲ ಹೊತ್ತು ಕಳೆದರು.ಸಿದ್ದರಾಮಯ್ಯನವರಿಗೆ ಉಡುಗೊರೆ ನೀಡಿ ಬೆಳಗಿನ ಉಪಾಹಾರ ಸೇವಿಸಿ ಮಾತುಕತೆ ನಡೆಸಿದರು.
ಕರ್ನಾಟಕದ ಮುಖ್ಯಮಂತ್ರಿಯಾಗಿ ಒಂದು ತಿಂಗಳು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಕುಟುಂಬದೊಂದಿಗೆ ಸಿದ್ದರಾಮಯ್ಯ ಅವರನ್ನು ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ ಮಾಡಿದರು.
.jpg)

.jpg)