ಲೋಕಬಂಧು ನ್ಯೂಸ್ | ಉಡುಪಿ, ಜು.7
ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಮರು ವಿನ್ಯಾಸಗೊಳಿಸಿದ ಹವಾಮಾನ ಆಧರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳ ವಿಮಾ ಯೋಜನೆಗೊಳಪಡಿಸಲು ನಿಗದಿಪಡಿಸಲಾಗಿದ್ದ ಬೆಳೆ ವಿಮೆ ನೋಂದಣಿ ಅವಧಿಯನ್ನು ಜುಲೈ 15ರ ವರೆಗೆ ವಿಸ್ತರಿಸಲಾಗಿದೆ.
ಜಿಲ್ಲೆಯ ಎಲ್ಲಾ ಅಧಿಸೂಚಿತ ವಿಮಾ ಘಟಕಗಳ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ನೋಂದಣಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದ್ದು, ಬೆಳೆ ವಿಮೆಗೊಳಪಡುವ ರೈತರು ಕೂಡಲೇ ತಮ್ಮ ಹತ್ತಿರದ ಬ್ಯಾಂಕ್ ಶಾಖೆ, ಗ್ರಾಮೀಣ ಸಹಕಾರಿ ಬ್ಯಾಂಕ್ ಶಾಖೆ, ಸಿ.ಎಸ್.ಸಿ ಅಥವಾ ಗ್ರಾಮ ಒನ್'ನ್ನು ಸಂಪರ್ಕಿಸಿ ಬೆಳೆ ವಿಮೆ ಮಾಡಿಸುವಂತೆ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
