ಒತ್ತಿನೆಣೆ ಗುಡ್ಡ ಕುಸಿತ: ಜಿಲ್ಲಾಧಿಕಾರಿ ಪರಿಶೀಲನೆ

ಲೋಕಬಂಧು ನ್ಯೂಸ್ | ಬೈಂದೂರು, ಜು.8
ಇಲ್ಲಿನ ಒತ್ತಿನೆಣೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಗುಡ್ಡ ಕುಸಿತಗೊಂಡ ಪ್ರದೇಶಕ್ಕೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಗುಡ್ಡ ಕುಸಿತದಿಂದ ಉಂಟಾಗಿರುವ ಪರಿಸ್ಥಿತಿಯನ್ನು ಅಧಿಕಾರಿಗಳೊಂದಿಗೆ ಅವಲೋಕಿಸಿದ ಅವರು, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಭಿಯಂತರರಿಂದ ಘಟನೆಗೆ ಸಂಬಂಧಿಸಿದ  ಮಾಹಿತಿ ಪಡೆದುಕೊಂಡರು.
ಕುಸಿತದ ಪ್ರಮಾಣ, ರಾಷ್ಟ್ರೀಯ ಹೆದ್ದಾರಿಗೆ ಎದುರಾಗಿರುವ ಅಪಾಯ ಹಾಗೂ ಈಗಾಗಲೇ ಕೈಗೊಂಡಿರುವ ತಾತ್ಕಾಲಿಕ ಸುರಕ್ಷತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಸ್ಥಳದಲ್ಲಿ ಶಾಶ್ವತ ಸುರಕ್ಷತಾ ಕಾಮಗಾರಿಗಳನ್ನು ಕೈಗೊಳ್ಳುವುದು ಅಗತ್ಯವಾಗಿದ್ದು, ಈ ಸಂಬಂಧ ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು. ಸಾರ್ವಜನಿಕರು ಹಾಗೂ ವಾಹನ ಸಂಚಾರದ ಸುರಕ್ಷತೆಗೆ ಮೊದಲ ಆದ್ಯತೆ ನೀಡುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.


ಮಳೆಗಾಲದ ಹಿನ್ನೆಲೆಯಲ್ಲಿ ಜಿಲ್ಲೆಯ ಗುಡ್ಡ ಕುಸಿತ ಸಂಭವಿಸಬಹುದಾದ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಜಿಲ್ಲಾಡಳಿತ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಮನವಿ ಮಾಡಲಾಗಿದೆ ಎಂದರು.




ಮಳೆಗಾಲದ ಹಿನ್ನೆಲೆಯಲ್ಲಿ ಗುಡ್ಡ ಕುಸಿತ ಸಂಭವಿಸಬಹುದಾದ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿದರ್ೇಶನ ನೀಡಿದ್ದು, ಜಿಲ್ಲಾಡಳಿತ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಮನವಿ ಮಾಡಲಾಗಿದೆ ಎಂದರು.