ಲೋಕಬಂಧು ನ್ಯೂಸ್ | ಉಡುಪಿ, ಜು.30
ಪೊಲೀಸ್ ಇಲಾಖೆಯ ಕಚೇರಿಯಲ್ಲಿ ಹಣದ ಬೇಡಿಕೆ ಆರೋಪಕ್ಕೆ ಸಂಬಂಧಿಸಿದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಪ್ರಾಥಮಿಕ ತನಿಖೆ ನಡೆಸಿದ ಬಳಿಕ ಕಾರ್ಕಳ ಡಿವೈಎಸ್.ಪಿ., ಸರ್ಕಲ್ ಇನ್ಸ್‌ಪೆಕ್ಟರ್ ಸೇರಿದಂತೆ ಮೂವರನ್ನು ಅಮಾನತುಗೊಳಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ವೀಡಿಯೊಗಳು ಹಾಗೂ ಆರೋಪಗಳ ಆಧಾರದ ಮೇಲೆ ಹೆಚ್ಚುವರಿ ಎಸ್.ಪಿ. ಅವರಿಂದ ಪ್ರಾಥಮಿಕ ತನಿಖೆ ನಡೆಸಲಾಗಿದೆ.
ತನಿಖಾ ವರದಿ ಮೇರೆಗೆ ಕಾರ್ಕಳ ಡಿವೈಎಸ್.ಪಿ. ವಿಜಯ ಪ್ರಸಾದ್, ಸರ್ಕಲ್ ಇನ್ಸ್‌ಪೆಕ್ಟರ್ ಸಂದೀಪ್ ಹಾಗೂ ಡಿವೈಎಸ್.ಪಿ ಕಚೇರಿ ಸಿಬ್ಬಂದಿ ಶಿವಾನಂದ ಎಂಬವರನ್ನು ಇಲಾಖಾ ಶಿಸ್ತು ಕ್ರಮ ಪೂರ್ಣಗೊಳ್ಳುವ ವರೆಗೆ ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.